
ಕಳೆದ ವರ್ಷ 260 ಪ್ರಯಾಣಿಕರ ಸಾವಿಗೆ ಕಾರಣವಾದ ಏರ್ ಇಂಡಿಯಾ ಎಐ-171 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಯಾವುದೇ ದೋಷವಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
ವಿಮಾನದ ಬ್ಲ್ಯಾಕ್ ಬಾಕ್ಸ್, ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಡೇಟಾವನ್ನು ಪರಿಶೀಲಿಸಿದ ನಂತರ ಈ ವಿಷಯ ದೃಢಪಟ್ಟಿದೆ.
ಅಪಘಾತದ ತನಿಖೆಯು ಅಂತಿಮ ಹಂತದಲ್ಲಿದ್ದು, ಅಮೆರಿಕದ ಸಿಯಾಟಲ್‌ನಲ್ಲಿ ವಿಮಾನದ ಥ್ರಸ್ಟ್ ನಿಯಂತ್ರಣ ಮಾಡ್ಯೂಲ್‌ನ ತಪಾಸಣೆ ನಡೆಯುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ.