
ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಶಶಿಧರ್, ಮಂಜುನಾಥ್ ಹಾಗೂ ಬಸವರಾಜ್ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಹನುಮೇಶ್ ಹಾಗೂ ಪ್ರವೀಣ್ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಐವರು ಸ್ನೇಹಿತರು ಬೆಂಗಳೂರಿನಿಂದ ಕುಷ್ಟಗಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.