
ಮಂಡ್ಯದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ 100.34 ಅಡಿಗೆ ಏರಿಕೆಯಾಗಿದ್ದು, ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಕೇವಲ ಮೂರು ದಿನಗಳಲ್ಲಿ 8 ಅಡಿ ನೀರು ಏರಿಕೆಯಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 23.079 ಟಿಎಂಸಿ ನೀರು ಸಂಗ್ರಹವಾಗಿದೆ.
ಹಾಸನದ ಹೇಮಾವತಿ ಜಲಾಶಯದಲ್ಲಿ 28.022 ಟಿಎಂಸಿ ಮತ್ತು ಕೊಪ್ಪಳದ ತುಂಗಭದ್ರಾ ಜಲಾಶಯದಲ್ಲಿ ಒಂದೇ ದಿನದಲ್ಲಿ 4 ಟಿಎಂಸಿ ನೀರು ಸಂಗ್ರಹವಾಗಿ ರೈತರಲ್ಲಿ ಸಂತಸ ಮೂಡಿಸಿದೆ.