Health & Environment
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮುಂದಿನ 5 ದಿನ ಭರ್ಜರಿ ಮಳೆ

ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮುಂದಿನ 5 ದಿನ ಭರ್ಜರಿ ಮಳೆ

oneindia1h
THE BRIEF
1

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಆಗಸ್ಟ್ 29ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2

ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯು ಚಂಡಮಾರುತದ ಒತ್ತಡವು ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದ್ದು, ಇದು ನೈಋತ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆ ಇದೆ.

3

ಮುಂದಿನ 5 ದಿನಗಳಲ್ಲಿ ಒಡಿಶಾ, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಲ್ಲಿ ರಣಮಳೆ ನಿರೀಕ್ಷಿಸಲಾಗಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.