
ಮಹಾರಾಷ್ಟ್ರದ ಬೀಡ್ ಜಿಲ್ಲೆಯ 47 ವರ್ಷದ ರಮಾಬಾಯಿ ರಣವೀರ್, ತಮ್ಮ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಬರಿಗಾಲಿನಲ್ಲಿ ಓಡಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಮ್ಯಾರಥಾನ್‌ನಲ್ಲಿ ಗೆದ್ದ 3,000 ರೂಪಾಯಿ ಬಹುಮಾನವನ್ನು ತಮ್ಮ ಇಬ್ಬರು ಹೆಣ್ಣು ಮಕ್ಕಳ ಪುಸ್ತಕ ಖರೀದಿಗೆ ಬಳಸುವುದಾಗಿ ಅವರು ತಿಳಿಸಿದ್ದಾರೆ.
ಅಕಾಡೆಮಿಯೊಂದರಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ರಮಾಬಾಯಿ ಅವರ ಮಗಳು ಪೂಜಾ ಕೂಡ ಅದೇ ಮ್ಯಾರಥಾನ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.