
ಕೆಪಿಎಸ್ಸಿ ಪರೀಕ್ಷಾ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ನಿವಾಸದ ಮೇಲೆ ಸತತ 9 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ.
ತಂದೆಯ ಅನಾರೋಗ್ಯದ ಕಾರಣ ನೀಡಿ 15 ದಿನಗಳ ರಜೆ ಪಡೆದಿದ್ದ ಜ್ಞಾನೇಂದ್ರ ಕುಮಾರ್ ಅವರು ಲಕ್ನೋ ಸಮೀಪದ ತಮ್ಮ ಮನೆಗೆ ಬಂದಿಲ್ಲ ಎಂದು ಅವರ ತಂದೆಯೇ ಸ್ಪಷ್ಟಪಡಿಸಿದ್ದಾರೆ.
ಮನೆಯಲ್ಲಿ ಯಾವುದೇ ಮಹತ್ವದ ದಾಖಲೆಗಳು ಸಿಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರ ನಿವಾಸಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ಅಂಟಿಸಿದ್ದಾರೆ.