
ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ದಸರಾ ಹಬ್ಬದ ಸಂಭ್ರಮದಲ್ಲಿ ಹೊಸ ಕಾರನ್ನು ಡೆಲಿವರಿ ಪಡೆದು ಶೋರೂಮ್‌ನಿಂದ ಹೊರತರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಕಾರು ಶೋರೂಮ್ ಎದುರಿನ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಗೆ ನುಗ್ಗಿ ಅಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಗುದ್ದಿದೆ.
ಈ ಅಪಘಾತದಿಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.