
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.