
ವಿಕಸಿತ ಭಾರತದ ಗುರಿ ಸಾಧನೆಗಾಗಿ ಬ್ಯಾಂಕಿಂಗ್ ಕ್ಷೇತ್ರದ ನೀಲನಕ್ಷೆ ರೂಪಿಸಲು ಕೇಂದ್ರ ಸರ್ಕಾರ ಶೀಘ್ರವೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಬ್ಯಾಂಕಿಂಗ್ ವಲಯದಲ್ಲಿ ವಸೂಲಾಗದ ಸಾಲದ ಪ್ರಮಾಣವು ಕಡಿಮೆ ಮಟ್ಟದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ತಂತ್ರಜ್ಞಾನದ ಬದಲಾವಣೆಗೆ ಅನುಗುಣವಾಗಿ ಸರ್ಕಾರಿ ಬ್ಯಾಂಕ್‌ಗಳು ತಮ್ಮ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಸಂಜಯ್ ಲೋಹಿಯಾ ಸಲಹೆ ನೀಡಿದ್ದಾರೆ.