
ಮಹಿಳಾ ಬೈಕರ್ ಶಿವಾನಿ ಚೌಹಾಣ್ ಅವರ ಬೈಕಿಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆದ ಪ್ರಕರಣದ ಪ್ರಮುಖ ಆರೋಪಿ ಕಲ್ಯಾಣ್ ಬೈನ್ಸ್ಲಾನನ್ನು ಗುರುಗ್ರಾಮ ಪೊಲೀಸರು ರಾಜಸ್ಥಾನದ ದೌಸಾದಲ್ಲಿ ಬಂಧಿಸಿದ್ದಾರೆ.
ಕಸ್ಟಡಿಗೆ ಪಡೆಯುವ ವೇಳೆ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಪರಾರಿಯಾಗಲು ಯತ್ನಿಸಿದ ಆರೋಪಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಲವಣೀಶ್ನನ್ನು ಬಂಧಿಸಲಾಗಿದ್ದು, ಪೊಲೀಸರು ಬಿಎನ್ಎಸ್ ಸೆಕ್ಷನ್ 109ರಡಿ ಕೊಲೆಯತ್ನ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.