
ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಬ್ಯಾಸ್ಕೆಟ್ಬಾಲ್ ಟೂರ್ನಿಯು ಚಿತ್ರದುರ್ಗದ ಡಾನ್ ಬೋಸ್ಕೊ ಪಿಯು ಕಾಲೇಜಿನಲ್ಲಿ ಶಾಸಕ ಕೆ.ಸಿ.ವೀರೇಂದ್ರ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿದೆ.
ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಶಿವಣ್ಣ ವಹಿಸಿದ್ದು, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದಾವಣಗೆರೆ ವಿಶ್ವವಿದ್ಯಾಲಯ ಮತ್ತು ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.