
ರಾಜ್ಯದಲ್ಲಿ ಕಳೆದ 75 ವರ್ಷಗಳಲ್ಲಿ ಕಾಣದಷ್ಟು ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಬರ ನಷ್ಟವು ಸುಮಾರು ₹60 ಸಾವಿರ ಕೋಟಿಗೆ ತಲುಪಿದ್ದು, NDRF ಮಾರ್ಗಸೂಚಿಯಡಿ ಸುಮಾರು ₹8 ರಿಂದ 10 ಸಾವಿರ ಕೋಟಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಬರ ನಿರ್ವಹಣೆಗೆ ಮೊದಲ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮಾರ್ಚ್ ವೇಳೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಲಿದೆ.