ಉಕ್ರೇನ್ನ ಕೀವ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಭೀಕರ ದಾಳಿಯಲ್ಲಿ ಮಗು ಸೇರಿದಂತೆ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಒಂದೇ ಕುಟುಂಬದ ಅಜ್ಜ, ಅಜ್ಜಿ ಮತ್ತು ಮೂರು ವರ್ಷದ ಮೊಮ್ಮಗ ಸೇರಿದ್ದು, ಅದೇ ಕುಟುಂಬದ ಮೂವರು ಮತ್ತು ಸಹಾಯಕ್ಕೆ ಬಂದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ರಷ್ಯಾದ ತೈಲ ಸಂಸ್ಕರಣಾ ಘಟಕದ ಮೇಲೆ ಉಕ್ರೇನ್ ನಡೆಸಿದ ದಾಳಿಯ ಪ್ರತೀಕಾರವಾಗಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.