
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಂಬಂಧಿಯ ವಿವಾಹ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ನಟಿ ತ್ರಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಚೆನ್ನೈನಲ್ಲಿ ನಡೆದ ಈ ಅರತಕ್ಷತೆ ಸಮಾರಂಭದಲ್ಲಿ ಸಿಎಂ ವಿಜಯ್ ತಾಯಿ ಶೋಭಾ ಚಂದ್ರಶೇಖರ್ ಕೂಡ ಜೊತೆಯಾಗಿದ್ದರು.
ಇತ್ತೀಚಿನ ಬಹುತೇಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ವ್ಯಕ್ತವಾಗಿದೆ.