
ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲಿನ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಇಡಿ ಕಚೇರಿಯಲ್ಲಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದಲ್ಲಿ ಸಭೆ ನಡೆಯಿತು.
ದಾಳಿಯ ಸಂದರ್ಭದಲ್ಲಿ ಇಡಿ ಅಧಿಕಾರಿಗಳು 3 ಕೋಟಿ ರೂಪಾಯಿಗೂ ಅಧಿಕ ನಗದು, ವಿದೇಶಿ ಕರೆನ್ಸಿ ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಆಫ್ರಿಕಾದ ಕಾಂಗೋದಲ್ಲಿ ಚಿನ್ನದ ಗಣಿಗಾರಿಕೆ ಕಂಪನಿಯಲ್ಲಿ ಶೇಕಡಾ 40ರಷ್ಟು ಪಾಲುದಾರಿಕೆ ಹಾಗೂ ವಿದೇಶಿ ಹೂಡಿಕೆ ಆರೋಪದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದಿದೆ.