
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ರವಿಶಂಕರ್ (ಎ8) ಮತ್ತು ವಿನಯ್ (ಎ10) ಅವರು ಮಾಫಿ ಸಾಕ್ಷಿಯಾಗಲು ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ಪ್ರದೋಷ್ ಪರ ವಕೀಲರು ಈ ಹೊಸ ಮನವಿಯನ್ನು ವಿರೋಧಿಸಿ ನ್ಯಾಯಾಲಯಕ್ಕೆ ಆಕ್ಷೇಪ ಸಲ್ಲಿಸಿದ್ದಾರೆ.
ಪ್ರದೋಷ್ ತನ್ನನ್ನು ದರ್ಶನ್ ಇರುವ ಕೊಠಡಿಯಿಂದ ಪ್ರತ್ಯೇಕವಾಗಿ ಇರಿಸುವಂತೆ ಕೋರಿದ್ದು, ನ್ಯಾಯಾಲಯವು ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿದೆ.