
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರನ್ನು ಸವದತ್ತಿಯ ವಿನೋದ್ ಹೊಗೆನ್ನವರ, ಆಕಾಶ್ ಜಾಧವ್ ಹಾಗೂ ರವಿ ಕುರುಬರ ಎಂದು ಗುರುತಿಸಲಾಗಿದೆ.
ಗಣೇಶ ಮೆರವಣಿಗೆ ವೀಕ್ಷಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.