
ಭಾರತದ ದಿಗ್ಗಜ ಬ್ಯಾಟರ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 12 ರನ್ ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಿಸಲಿದ್ದಾರೆ.
ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 13,000 ರನ್ ಪೂರೈಸಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಪ್ರಸ್ತುತ 3ನೇ ಕ್ರಮಾಂಕದಲ್ಲಿ 250 ಇನ್ನಿಂಗ್ಸ್‌ಗಳಿಂದ 12,988 ರನ್ ಗಳಿಸಿರುವ ಕೊಹ್ಲಿ, ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (12,662 ರನ್) ಅವರನ್ನು ಹಿಂದಿಕ್ಕಿ ಈ ದಾಖಲೆಗೆ ಸಜ್ಜಾಗಿದ್ದಾರೆ.