
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಹೊರಗೆ ಬಿಜೆಪಿ ಶಾಸಕರು ನಡೆಸಿದ ಪ್ರತಿಭಟನೆಯು ಹತ್ಯೆಯ ಸಂಚು ಎಂದು ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಆರೋಪಿಸಿದ್ದಾರೆ.
ಆಗಸ್ಟ್ 10ರಂದು ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರು ಸಿಎಂ ನಿವಾಸದ ಮುಂದೆ ಧರಣಿ ನಡೆಸಿದ್ದು, ಇದು ಭದ್ರತಾ ಲೋಪಕ್ಕೆ ಕಾರಣವಾಗಿದೆ ಎಂದು ಸಚಿವರು ದೂರಿದ್ದಾರೆ.
ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.