
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದರು.
ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದಾಗ ಹೊಸಕೋಟೆ-ದಾಬಸ್ಪೇಟೆಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.