
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಆಗಸ್ಟ್ 24ರವರೆಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಕಡೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.
ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 19 ರಿಂದ 21ರವರೆಗೆ ಮತ್ತು ಉತ್ತರಾಖಂಡದಲ್ಲಿ ಆಗಸ್ಟ್ 20 ರಿಂದ 24ರವರೆಗೆ ತೀವ್ರ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.