
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯು ಭಾರತದ ಆಂತರಿಕ ವಿಷಯವಾಗಿದ್ದು, ದೇಶದ ಸಾರ್ವಭೌಮತ್ವದ ನಿರ್ಧಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಸಹಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.
ಎಫ್ಸಿಆರ್ಎ ನಿಯಮಗಳು ಎನ್ಜಿಒಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ತಡೆಯುತ್ತಿವೆ ಎಂದು ಅಮೆರಿಕದ ಸಂಸದರೊಬ್ಬರು ವ್ಯಕ್ತಪಡಿಸಿದ್ದ ಟೀಕೆಗೆ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರೀಯ ಭದ್ರತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಇದು ಭಾರತದ ಸಂಸತ್ತು ರೂಪಿಸಿರುವ ಶಾಸನಬದ್ಧ ಕಾನೂನಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.