
ಮೈಸೂರು ದಸರಾ 2026ರ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ತಿಳಿಸಿದರು.
ಈ ಬಾರಿಯ ದಸರಾದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಆಯೋಜಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಕಂಬಳ ಆಯೋಜನೆ ಖಚಿತವಾದರೆ ಅದಕ್ಕಾಗಿ 18ನೇ ಉಪಸಮಿತಿಯನ್ನು ರಚಿಸಲಾಗುವುದು.
ದಸರಾ ವೀಕ್ಷಣೆಯ ಗೋಲ್ಡ್ ಪಾಸ್ ಗೊಂದಲಗಳಿಗೆ ತೆರೆ ಎಳೆಯಲು, ಆಸನಗಳ ಸಂಖ್ಯೆಗೆ ತಕ್ಕಂತೆ ಮಾತ್ರ ಪಾಸ್ಗಳನ್ನು ಮುದ್ರಿಸಿ, ಹಣ ನೀಡಿ ಖರೀದಿಸುವ ಸಾರ್ವಜನಿಕರಿಗೆ ಮಾತ್ರ ನೀಡಲಾಗುವುದು ಮತ್ತು ವಿಐಪಿಗಳಿಗೆ ಉಚಿತ ಗೋಲ್ಡ್ ಪಾಸ್ ನೀಡದಿರಲು ನಿರ್ಧರಿಸಲಾಗಿದೆ.