
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವೆ ಅಕ್ಟೋಬರ್ 6 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಅನಧಿಕೃತ ಏಕದಿನ ಸರಣಿಯಿಂದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದಾಗಿ ಹೊರಗುಳಿದಿದ್ದಾರೆ.
ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಾಂಶ್ ಶೆಡ್ಗೆ ಮತ್ತು ನಮನ್ ಧೀರ್ ಬದಲಿಗೆ ಅನುಕುಲ್ ರಾಯ್ ಅವರನ್ನು ಭಾರತ 'ಎ' ತಂಡಕ್ಕೆ ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದ ರುತುರಾಜ್ ಗಾಯಕ್ವಾಡ್ ಭಾರತ 'ಎ' ತಂಡವನ್ನು ಮುನ್ನಡೆಸಲಿದ್ದು, ಕನ್ನಡಿಗ ದೇವದತ್ ಪಡಿಕ್ಕಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.