
ಕೆಪಿಎಸ್ಸಿ ಪಶುವೈಧ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಲಬುರಗಿಯ ನ್ಯೂ ಓಜಾ ಬಡಾವಣೆಯಲ್ಲಿರುವ ಅಭ್ಯರ್ಥಿ ಮಮಿತಾ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮೂಲಕ ಹುದ್ದೆ ಪಡೆಯಲು ಮಮಿತಾ ಡೀಲ್ ಮಾಡಿಕೊಂಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ನಾಪತ್ತೆಯಾಗಿರುವ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಮತ್ತು ಮಮಿತಾ ನಡುವಿನ ಸಂಪರ್ಕದ ಬಗ್ಗೆ ಸಿಐಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ.