
ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯ ಸರ್ಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಆಯೋಗಕ್ಕೆ ಮೇಜರ್ ಸರ್ಜರಿ ಮಾಡಿದೆ.
ಪರೀಕ್ಷಾ ನಿಯಂತ್ರಕ ಹುದ್ದೆಗೆ ಹೆಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಯಾದಗಿರಿ ಸಿಇಒ ಲವೀಶ್ ಓರ್ಡಿಯಾ ಅವರನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಪರೀಕ್ಷಾ ನಿಯಂತ್ರಣ ಅಧಿಕಾರಿಯಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಯಾವುದೇ ಪರ್ಯಾಯ ಜಾಗ ತೋರಿಸದೆ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.