Health & Environment
ಬೆಂಗಳೂರಿನ ಬನಶಂಕರಿ 5ನೇ ಹಂತದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಬೆಂಗಳೂರಿನ ಬನಶಂಕರಿ 5ನೇ ಹಂತದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

tv9kannada48m
THE BRIEF
1

ಬೆಂಗಳೂರಿನ ಬನಶಂಕರಿ 5ನೇ ಹಂತದ 2ನೇ ಬ್ಲಾಕ್ ಹಾಗೂ 6ನೇ ಹಂತದ ಸುತ್ತಮುತ್ತ ಒಂಟಿ ಚಿರತೆಯೊಂದು ಓಡಾಡುತ್ತಿದ್ದು, ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.

2

ಸೆಪ್ಟೆಂಬರ್ 10ರ ಮುಂಜಾನೆ 4 ಗಂಟೆಗೆ ಕೇಶವ್ ಎಂಬುವವರ ಮನೆಯ ಮುಂದೆ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಾಯಿಗಳ ಬೊಗಳಿಕೆಯಿಂದ ಅದು ಅಲ್ಲಿಂದ ಕಾಲ್ಕಿತ್ತಿದೆ.

3

ಜುಲೈ 25ರಂದು ಕೂಡ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಬೋನು ಇಟ್ಟು ಚಿರತೆಯನ್ನು ಸೆರೆಹಿಡಿಯಬೇಕೆಂದು ನಿವಾಸಿಗಳು ಒತ್ತಾಯಿಸುತ್ತಿದ್ದಾರೆ.