‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಟರ್ಕಿಯಲ್ಲಿ ಕಚೇರಿ ಹೊಂದಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಮಿತ್ ಮಾಳವೀಯ ಹಾಗೂ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಇಸ್ತಾನ್ಬುಲ್ ಕಾಂಗ್ರೆಸ್ ಸೆಂಟರ್ನ ಚಿತ್ರವನ್ನು ಕಾಂಗ್ರೆಸ್ ಕಚೇರಿ ಎಂದು ಬಿಂಬಿಸಿ, ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶ ಹೊಂದಿದ್ದರು ಎಂದು ದೂರು ನೀಡಲಾಗಿತ್ತು.
ಮಾಳವೀಯ ಮತ್ತು ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಎಫ್ಐಆರ್ ರದ್ದುಗೊಳಿಸಿದೆ.