
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮ್ ಕುಮಾರ್ ಮತ್ತು ಹೃತಿಕ್ ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಈ ಐವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.