
ಸಚಿವ ಸತೀಶ್ ಜಾರಕಿಹೊಳಿ ಅವರು ನಾಯಕ ಸಮುದಾಯದ ಬೃಹತ್ ಸಮಾವೇಶವನ್ನು ನವೆಂಬರ್ನಲ್ಲಿ ನಡೆಸಲು ಸಿದ್ಧತೆಗಳನ್ನು ಆರಂಭಿಸಿದ್ದು, ಈ ಸಂಬಂಧ ತಮ್ಮ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಚಿವರ ಗೃಹ ಕಚೇರಿಯಲ್ಲಿ ನಡೆದ ಈ ಪೂರ್ವ ಸಿದ್ಧತಾ ಸಭೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಮತ್ತು ವಾಲ್ಮೀಕಿ ಸಮುದಾಯದ ಶ್ರೀಗಳು ಭಾಗವಹಿಸಿದ್ದರು.
ಇತ್ತೀಚೆಗೆ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿಯ ನಂತರ ಈ ಬೆಳವಣಿಗೆ ನಡೆದಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.