
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಿಜರ್ಲೆಂಡ್ ಕಾನ್ಫೆಡರೇಶನ್ ಅಧ್ಯಕ್ಷ ಗೈ ಪಾರ್ಮೆಲಿನ್ ಅವರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿ ನಡೆಸಿ, ಜಾಗತಿಕ ಶಾಂತಿ ಮತ್ತು ಸ್ಥಿರತೆಗಾಗಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡಲಿವೆ ಎಂದು ತಿಳಿಸಿದ್ದಾರೆ.
ಉಕ್ರೇನ್ ಯುದ್ಧ ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಶಾಂತಿಯತ್ತ ಕೈಗೊಳ್ಳುವ ಎಲ್ಲ ಸಕಾರಾತ್ಮಕ ಪ್ರಯತ್ನಗಳನ್ನು ಭಾರತ ಬೆಂಬಲಿಸಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 7ರಂದು ಭಾರತ-ಇಎಫ್ಟಿಎ ಉದ್ಯಮ ನಾಯಕರ ಸಮೃದ್ಧಿ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಚರ್ಚೆ ನಡೆಸಲಾಗಿದೆ.