ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 2007-08ರಿಂದ ಕರ್ತವ್ಯ ನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಡಾ. ಶಿವಲಿಂಗಪ್ಪ ಸೇರಿದಂತೆ 12 ಮಂದಿ ವೈದ್ಯಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದೆ.
ಸೇವೆಯನ್ನು ಕಾಯಂಗೊಳಿಸುವ ಮನವಿಯನ್ನು ತಿರಸ್ಕರಿಸಿ 2026ರ ಜುಲೈ 23ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವೈದ್ಯಾಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.