
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ದಳದ (ಎಸ್ಐಟಿ) ಕಚೇರಿಯು ಮಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ಆರಂಭವಾಗಿದೆ.
ಡಿಐಜಿಪಿ ಎನ್.ಶಶಿಕುಮಾರ್ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಒಟ್ಟು 16 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಈ ಸಭೆಯಲ್ಲಿ ಹಿಂದಿನ ಸಿಐಡಿ ಹಾಗೂ ಸಿಬಿಐ ತನಿಖಾ ವರದಿಗಳ ವಿಶ್ಲೇಷಣೆ ಮತ್ತು ಸಾಕ್ಷಿಗಳ ವಿಚಾರಣೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.