
ರಾಜ್ಯದಲ್ಲಿ ಸ್ಥಗಿತಗೊಂಡಿರುವ ವೃದ್ಧಾಪ್ಯ ಮತ್ತು ಅಂಗವಿಕಲ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಸಮಸ್ಯೆಗಳನ್ನು ಮುಂದಿನ ಎರಡು ವಾರಗಳಲ್ಲಿ ಬಗೆಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
ಅರ್ಹ ವಯಸ್ಸು ತಲುಪದವರು ಅರ್ಜಿ ಸಲ್ಲಿಸಿರುವ ಕಾರಣ ಸುಮಾರು 23 ಲಕ್ಷ ಅನರ್ಹ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಧ್ಯಂತರದಲ್ಲಿ ಪಿಂಚಣಿ ವಿತರಣೆ ಸ್ಥಗಿತಗೊಂಡಿತ್ತು ಎಂದು ಅವರು ತಿಳಿಸಿದರು.
ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ₹22,000 ಕೋಟಿ ಮನವಿ ಮಾಡಲಾಗಿದ್ದು, ರೈತರಿಗೆ ಮೊದಲ ಹಂತದಲ್ಲಿ ₹2,500 ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಒಟ್ಟು ₹5,000 ಪರಿಹಾರ ತಲುಪಲಿದೆ ಎಂದರು.