
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದೆ.
ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಚೀನಾದ ಜಿಯಾ ಯಿ ಫಾನ್ ಮತ್ತು ಝಾಂಗ್ ಶು ಷಿಯಾನ್ ಅವರನ್ನು 16–21, 21–15, 21–13 ಅಂತರದಿಂದ ಸೋಲಿಸಿ ಗೆಲುವು ಸಾಧಿಸಿತು.
ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಚೀನಾದ ಲಿಯಾಂಗ್ ವೀ ಕೆಂಗ್–ವಾಂಗ್ ಚಾಂಗ್ ಎದುರು 18–21, 9–21 ಅಂತರದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ.