
ಬೆಂಗಳೂರಿನಲ್ಲಿ ಸ್ಕೂಟರ್ ಸವಾರನೊಬ್ಬ ಬೆನ್ನಿಗೆ ಗಿಟಾರ್ ಬ್ಯಾಗ್ ಹಾಕಿಕೊಂಡು ಪ್ರಯಾಣಿಸುತ್ತಿದ್ದಾಗ, ಔಟರ್ ರಿಂಗ್ ರಸ್ತೆಯಲ್ಲಿರುವ ಎಐ ಟ್ರಾಫಿಕ್ ಕ್ಯಾಮೆರಾ ಅದನ್ನು 'ಹಿಂಬದಿ ಸವಾರ' ಎಂದು ತಪ್ಪಾಗಿ ಗ್ರಹಿಸಿದೆ.
ಹಿಂಬದಿ ಸವಾರ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಎಐ ಕ್ಯಾಮೆರಾ ಸವಾರನಿಗೆ 500 ರೂ. ದಂಡ ವಿಧಿಸಿ ಮೊಬೈಲ್ಗೆ ಸಂದೇಶ ಕಳುಹಿಸಿದೆ.
ಈ ತಾಂತ್ರಿಕ ದೋಷದ ಬಗ್ಗೆ ಸವಾರ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದು, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಪ್ರಕರಣವನ್ನು ಪರಿಶೀಲಿಸಿ ತಪ್ಪು ಚಲನ್ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.