ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರತಿ ಕ್ಷೇತ್ರದ ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದ್ದು, ಒಟ್ಟು 4,785 ಸ್ಥಾನಗಳಿಗೆ ಮೀಸಲು ನಿಗದಿ ಮಾಡಲಾಗಿದೆ.
ಎಲ್ಲ ವರ್ಗಗಳ ಮೀಸಲಾತಿಯಲ್ಲೂ ಆಯಾ ವರ್ಗದ ಮಹಿಳೆಯರಿಗೆ ಶೇ 50ರಷ್ಟು ಮೀಸಲಿಡಲಾಗಿದೆ.
ಮೀಸಲಾತಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರ ಸಂಜೆ 5ರವರೆಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.