
ಅಟ್ಟಿಕಾ ಗೋಲ್ಡ್ ಕಂಪನಿಯ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಮುಕ್ತಾಯಗೊಂಡ ಕೆಲವೇ ಗಂಟೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಂಪನಿಗೆ ಸಂಬಂಧಿಸಿದ ಒಟ್ಟು 19 ಪ್ರದೇಶಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿ ಹಣಕಾಸು ವ್ಯವಹಾರ ಹಾಗೂ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನೇರವಾಗಿ ಗ್ರಾಹಕರಿಂದ ಚಿನ್ನ ಖರೀದಿ ಹಾಗೂ ವ್ಯವಹಾರಗಳಲ್ಲಿ ನಡೆದಿರುವ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಈ ತನಿಖೆ ಮುಂದುವರಿದಿದೆ.