
ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿನ ರಾಜಕೀಯ ಹಸ್ತಕ್ಷೇಪದ ಕಾರಣದಿಂದಾಗಿ, 2027ರ ಚೊಚ್ಚಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ಹಕ್ಕನ್ನು ಐಸಿಸಿ ಭಾರತಕ್ಕೆ ಹಸ್ತಾಂತರಿಸಿದೆ.
ಈ ನಿರ್ಧಾರದಿಂದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಪ್ರವಾಸೋದ್ಯಮ ಮತ್ತು ವಾಣಿಜ್ಯ ಆದಾಯ ಸೇರಿದಂತೆ ಸುಮಾರು 20 ಮಿಲಿಯನ್ ಯುಎಸ್ ಡಾಲರ್ ಅಂದರೆ 188 ಕೋಟಿ ರೂ.ಗಳ ನಷ್ಟ ಅನುಭವಿಸಲಿದೆ.
ಐಸಿಸಿ ನಿಯಮಗಳ ಪ್ರಕಾರ ಯಾವುದೇ ದೇಶದ ಕ್ರಿಕೆಟ್ ಮಂಡಳಿಯಲ್ಲಿ ಸರ್ಕಾರಿ ಹಸ್ತಕ್ಷೇಪ ಇರಬಾರದು ಎಂಬ ನಿಯಮ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.