
ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನದ 'ಸಿಗ್ಮಾ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ಈಗ ನಾಯಕ ನಟನಾಗಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ.
ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದ ಈ ಹೊಸ ಸಿನಿಮಾಗೆ ಬರೋಬ್ಬರಿ 35 ಕೋಟಿ ರೂಪಾಯಿ ಬಜೆಟ್ ನಿಗದಿಪಡಿಸಲಾಗಿದ್ದು, ಜೇಸನ್ ಸಂಜಯ್‌ಗೆ 10 ಕೋಟಿ ಸಂಭಾವನೆ ನೀಡಲಾಗುತ್ತಿದೆ.
ಈ ಹೊಸ ಚಿತ್ರಕ್ಕಾಗಿ ಲಿಂಗುಸಾಮಿ ಸೇರಿದಂತೆ ಹಲವು ನಿರ್ದೇಶಕರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಶೀಘ್ರ ಅಧಿಕೃತ ಪ್ರಕಟಣೆ ಹೊರಬೀಳಲಿದೆ.