
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಪಕ್ಷಗಳ ಪ್ರತಿಭಟನೆಗೆ ಬಿಜೆಪಿ ತಿರುಗೇಟು ನೀಡಿದೆ.
ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಮತ್ತು ನಿಷ್ಪಕ್ಷಪಾತ ನಿರ್ಧಾರಗಳನ್ನು ಶ್ಲಾಘಿಸಿರುವ ಬಿಜೆಪಿ, ಅವರು ಪದ್ಮಭೂಷಣ ಪ್ರಶಸ್ತಿಗೆ ಅರ್ಹರು ಎಂದು ಹೇಳಿದೆ.
ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ, ಎಸ್‌ಐಆರ್ ಯೋಜನೆಯು ಅಕ್ರಮ ನುಸುಳುಕೋರರ ಹೆಸರುಗಳನ್ನು ತೆಗೆದುಹಾಕಲು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.