
ಧಾರವಾಡ ಜಿಲ್ಲೆ ಹಾಗೂ ಕುಂದಗೋಳ ತಾಲೂಕಿನಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಬಿಜೆಪಿ ಶಾಸಕ ಎಂ.ಆರ್. ಪಾಟೀಲ್ ಒತ್ತಾಯಿಸಿದ್ದಾರೆ.
ಬೆಳೆಹಾನಿಗೆ ಪ್ರತಿ ಹೆಕ್ಟೇರ್ಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿರುವ ಅವರು, ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸಿದರೆ ತಾವೇ ತಮ್ಮ ಒಂದು ವರ್ಷದ ವೇತನವನ್ನು ನೀಡುವುದಾಗಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರ ಘೋಷಿಸಿರುವ ಅಲ್ಪ ಪ್ರಮಾಣದ ಸಹಾಯಧನವು ಕಣ್ಣೊರೆಸುವ ತಂತ್ರವಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗೋಶಾಲೆಗಳನ್ನು ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.