
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಪಿಎ ನಾಗರಾಜು ಸೇರಿದಂತೆ ನಾಲ್ವರು ತಮ್ಮ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದಾರೆ ಎಂದು ಧನ್ವೀರ್ ಅವರ ತಂದೆ ತಿಮ್ಮ ಗೌಡ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಕ್ಟೋಬರ್ 21ರಂದು ವಿಜಯಲಕ್ಷ್ಮಿ ಮತ್ತು ನಾಗರಾಜು ಧನ್ವೀರ್ ಬಗ್ಗೆ ವಿಚಾರಿಸಲು ಅವರ ಮನೆಗೆ ತೆರಳಿದ್ದಾಗ, ಅಲ್ಲಿ ನಡೆದ ಮಾತಿನ ಚಕಮಕಿಯ ಬಳಿಕ ಇತರೆ ವ್ಯಕ್ತಿಗಳನ್ನು ಕರೆಸಿ ಜೋರು ಧ್ವನಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದ್ದು, ಪೊಲೀಸರು ವಿಜಯಲಕ್ಷ್ಮಿ ಹಾಗೂ ಇತರರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ.