
ದಾವಣಗೆರೆಯಲ್ಲಿ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಕಾರ್ತಿಕ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆಯಾಗಿದೆ.
1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗೆ 40 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.
ಬಾಲಕಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಶಿಫಾರಸು ಮಾಡಿದೆ.