
ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಮೃತಪಟ್ಟು, 8 ಮಂದಿ ಗಾಯಗೊಂಡಿದ್ದಾರೆ.
ಮೃತರ ಕುಟುಂಬಕ್ಕೆ ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸುತ್ತಿದೆ.
ಈ ತಿಂಗಳು ಸೌದಿ ವಿಮಾನ ನಿಲ್ದಾಣಗಳ ಮೇಲೆ ನಡೆದ ದಾಳಿಗಳಲ್ಲಿ ಒಟ್ಟು 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.