
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ಕ್ರಮಗಳ ಕುರಿತು ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ಏಪ್ರಿಲ್ನಿಂದ ಇಲ್ಲಿಯವರೆಗೆ 10,202 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿರುವ ಜಿಬಿಎ, ರಸ್ತೆ ದುರಸ್ತಿಯು ನಿರಂತರ ಪ್ರಕ್ರಿಯೆ ಎಂದು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದೆ.
ರಸ್ತೆ ಗುಂಡಿಗಳಿಂದ ಸಂಭವಿಸಿದ ಸಾವು ಮತ್ತು ಗಾಯದ ಪ್ರಕರಣಗಳ ಎಫ್ಐಆರ್ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರದ ವಕೀಲರಿಗೆ ನ್ಯಾಯಾಲಯವು ಇದೇ ಸಂದರ್ಭದಲ್ಲಿ ಸೂಚನೆ ನೀಡಿದೆ.