
ಉಕ್ರೇನ್ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ನವೆಂಬರ್ 10ರ ನಂತರ ರಷ್ಯಾ, ಉಕ್ರೇನ್ ಮತ್ತು ಅಮೆರಿಕದ ತ್ರಿಪಕ್ಷೀಯ ಮಾತುಕತೆಯನ್ನು ಪುನರಾರಂಭಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಮ್ಮತಿಸಿದ್ದಾರೆ ಎಂದು ಕ್ರೆಮ್ಲಿನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ರಷ್ಯಾ ಅಧ್ಯಕ್ಷರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಯೂರಿ ಉಷಾಕೋವ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ಮಾಹಿತಿ ಹೊರಬಿದ್ದಿದೆ.
ಯುದ್ಧದ ಅಂತ್ಯದ ಬಳಿಕ ರಷ್ಯಾ ಮತ್ತು ಉಕ್ರೇನ್ಗೆ ಹೊಸ ಭದ್ರತಾ ವ್ಯವಸ್ಥೆಯನ್ನು ನಿರ್ಮಿಸುವುದೇ ಈ ಮಾತುಕತೆಗಳ ಮುಖ್ಯ ಗುರಿಯಾಗಿದ್ದು, ಶಾಂತಿ ಪ್ರಕ್ರಿಯೆಗೆ ಹೊಸ ಆವೇಗ ದೊರೆತಿದೆ.