
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್ ಸೆಪ್ಟೆಂಬರ್ 8ರಂದು ಆದೇಶ ಪ್ರಕಟಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಮರು ಆದೇಶ ಹೊರಡಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದರ್ಶನ್ ಪರ ವಕೀಲ ನಾಸಿರ್ ಅಲಿ ಅವರು ನ್ಯಾಯಾಲಯದ ಆದೇಶದ ವಿವರಗಳನ್ನು ನೀಡಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.