ಪ್ಯಾರಿಸ್ನ ಪೋರ್ಟೆ ಡಿ ಕ್ಲಿಚಿಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಹರಿತವಾದ ಚಾಕುಗಳಿಂದ ಗರ್ಭಿಣಿ ಮಹಿಳೆ ಸೇರಿದಂತೆ 19, 24 ಮತ್ತು 36 ವರ್ಷದ ಮೂವರು ಮಹಿಳೆಯರ ಮೇಲೆ ದಾಳಿ ನಡೆಸಿದ್ದಾನೆ.
ಆರೋಪಿಯು 'ಅಲ್ಲಾಹನ ಆಜ್ಞೆಯ ಮೇರೆಗೆ' ಈ ಕೃತ್ಯ ಎಸಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ಯಾರಿಸ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ದಾಳಿಯ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.