
ರಾಷ್ಟ್ರೀಯ ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ ವಾರ್ಷಿಕ 1.5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಯುಜಿಸಿ ಸಿದ್ಧತೆ ನಡೆಸಿದೆ.
30 ವರ್ಷಕ್ಕಿಂತ ಕಡಿಮೆ ವಯಸ್ಸಿನ, ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ನ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು scholarships.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆಗಳ ನೋಡಲ್ ಅಧಿಕಾರಿಗಳು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗೆ ಅವುಗಳನ್ನು ಪರಿಶೀಲಿಸಿ ಅನುಮೋದಿಸಬೇಕು ಅಥವಾ ತಿರಸ್ಕರಿಸಬೇಕು ಎಂದು ಯುಜಿಸಿ ನಿರ್ದೇಶನ ನೀಡಿದೆ.